ಚಿತ್ರದುರ್ಗ: ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಬಿಎನ್ ಚಂದ್ರಪ್ಪ ಪರ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭೋವಿ ಗುರು ಪೀಠಕ್ಕೆ ಭೇಟಿ ನೀಡಿರುವುದು ಅಚ್ಚರಿಗೆ ಎಡೆ ಮಾಡಿಕೊಟ್ಟಿತು. ಭೋವಿ ಗುರು ಪೀಠದ ಪೀಠಾಧಿಪತಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಯರನ್ನು ಭೇಟಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಕೂಡ ಮಾಡಲಾಗಿದೆ.
ಭೋವಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ - ಟಿಬಿ ಜಯಚಂದ್ರ
ಬಿಜೆಪಿಗೆ ಸೆಡ್ಡು ಹೊಡೆದಿರುವ ಸಿದ್ದರಾಮೇಶ್ವರ ಶ್ರೀ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ.
ಬಿಜೆಪಿಗೆ ಸೆಡ್ಡು ಹೊಡೆದಿರುವ ಸಿದ್ದರಾಮೇಶ್ವರ ಶ್ರೀ ಭೇಟಿಯಾಗಿರುವುದು ಬಿಜೆಪಿಗೆ ತಳಮಳ ಸೃಷ್ಠಿಸಿದೆ. ಭೋವಿ ಸಮುದಾಯದ ಮತ ಸೆಳೆಯಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದು, ಕಾಂಗ್ರೆಸ್ ಭೋವಿ ಸಮಾಜಕ್ಕೆ ಸಾಕಷ್ಟು ಕಾರ್ಯಕ್ರಮ ನೀಡಿದೆ ಎಂದು ಸಿದ್ದರಾಮಯ್ಯ ಶ್ರೀಗಳಿಗೆ ಮನವರಿಕೆ ಮಾಡಿಕೊಟ್ಟರು.
ನಂತರ ಮುರುಘಾ ಮಠಕ್ಕೆ ಧಿಢೀರ್ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಠದ ಪೀಠಾಧಿಪತಿ ಡಾ.ಶ್ರೀ. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಕೂಡ ಪಡೆದರು. ನಂತರ ಮುರುಘಾ ಮಠದಲ್ಲಿ ಪ್ರಸಾದ ಸ್ವೀಕರಿಸಿದರು. ಇದೇ ವೇಳೆ ಉಸ್ತುವಾರಿ ಸಚಿವ ವೆಂಕಟರಮಣಪ್ಪ, ಟಿಬಿ ಜಯಚಂದ್ರ, ಕೂಡ ಇದ್ರು.