ಚಿತ್ರದುರ್ಗ :ರೈತರ ವಿರೋಧಿ ಕಾಯ್ದೆಗಳನ್ನ ರದ್ದು ಪಡಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಕಾರ್ಯಕರ್ತರು ಧರಣಿ ನಡೆಸಿದರು.
ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತ ಮುಖಂಡರಿಂದ ಧರಣಿ.. ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆ ಪಕ್ಕದಲ್ಲಿ ಮಹಾತ್ಮ ಗಾಂಧೀಜಿ ಹುತಾತ್ಮ ದಿನಾಚರಣೆ ಅಂಗವಾಗಿ ವಿವಿಧ ರೈತ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರ ಜಾರಿ ಮಾಡಿದ ರೈತ ವಿರೋಧಿ ಕಾಯ್ದೆಗಳ ಹಿಂಪಡೆಯುವಂತೆ ಒತ್ತಾಯಿಸಿದ್ರು.
ಸರ್ಕಾರ ಜಾರಿ ಮಾಡಿದ ಮೂರು ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ಈ ಕಾಯ್ದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಪ್ರತಿಭಟಿಸಿದರು. ಆದರೆ, ಸರ್ಕಾರ ಮಾತ್ರ ಕೃಷಿಕರ ಹಾಗೂ ಹೋರಾಟಗಾರರ ಬಗ್ಗೆ ಕಿಂಚ್ಚಿತ್ತು ಕಾಳಜಿ ವಹಿಸುತ್ತಿಲ್ಲ ಎಂದು ಸತ್ಯಾಗ್ರಹನಿರತ ರೈತ ಮುಖಂಡರು ದೂರಿದರು.
ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಜಾರಿ ಸೇರಿ ಹಲವು ಕಾಯ್ದೆಗಳ ವಿರುದ್ಧ ದೇಶಾದ್ಯಂತ ಕೃಷಿಕರು ಹೋರಾಟ ನಡೆಸುತ್ತಿದ್ದಾರೆ. ಇತ್ತ ದೆಹಲಿಯಲ್ಲಿ ಕಾಯ್ದೆ ವಿರುದ್ಧವಾಗಿ ಪ್ರತಿಭಟಿಸುವ ಸಮಯದಲ್ಲಿ ಹಲವು ರೈತರು ಪ್ರಾಣ ಕಳೆದುಕೊಂಡಿದ್ದು, ಹುತಾತ್ಮ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಇನ್ನು, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಸರ್ಕಾರ ಭಯೋತ್ಪಾದಕರ ಹಣೆಪಟ್ಟಿ ಕಟ್ಟಲು ಹೊರಟಿವುದು ಸರಿಯಲ್ಲ ಎಂದು ರೈತರ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.