ಚಿತ್ರದುರ್ಗ:ಮಾಜಿ ಎಂಎಲ್ಸಿ ರಘು ಆಚಾರ್ಗೆ ಕಾಂಗ್ರೆಸ್‌ನಿಂದ ಅನ್ಯಾಯ ಆಗಿದೆ ಎಂದು ಜೆಡಿಎಸ್ ಎಂಎಲ್ಸಿ ಟಿ.ಎ.ಶರವಣ ಹೇಳಿದರು. ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿಂದು ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಘು ಆಚಾರ್ ತಮ್ಮ ಮನೆಗೆ ಊಟಕ್ಕೆ ಕರೆದಿದ್ದಾರೆ. ನಾವು ಅವರ ಮನೆಗೆ ಊಟಕ್ಕೆ ತೆರಳುತ್ತಿದ್ದೇವೆ, ರಘು ಆಚಾರ್ರನ್ನು ಜೆಡಿಎಸ್‌ಗೆ ಆಹ್ವಾನಿಸುತ್ತೇವೆ ಎಂದರು. ಇದೇ ವೇಳೆ ರಾಷ್ಟ್ರೀಯ ಪಕ್ಷಗಳ ಅವ್ಯವಸ್ಥೆಯಿಂದ ಬೇಸತ್ತು ಬಿಜೆಪಿ ಮತ್ತು ಕಾಂಗ್ರೆಸ್‌ನ ಅನೇಕರು ಜೆಡಿಎಸ್ನತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಸೇರಲಿದ್ದಾರೆ ಕಾಂಗ್ರೆಸ್‌ನ ಮಾಜಿ ಪರಿಷತ್ ಸದಸ್ಯ ರಘು ಆಚಾರ್ - ಚಿತ್ರದುರ್ಗದ ಆರು ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಲಿದೆ
ಮಾಜಿ ಎಂಎಲ್ಸಿ ರಘು ಆಚಾರ್ ಅವರು ತಾವು ಬೇಷರತ್ತಾಗಿ ಜೆಡಿಎಸ್ ಪಕ್ಷ ಸೇರ್ಪಡೆ ಆಗುತ್ತಿರುವುದಾಗಿ ತಿಳಿಸಿದ್ದಾರೆ.
ಏ.14 ರಂದು ಜೆಡಿಎಸ್ ಸೇರ್ಪಡೆಯಾಗಲಿರುವ ಮಾಜಿ MLC ರಘು ಆಚಾರ್
ಬಳಿಕ ಮಾತನಾಡಿದ ರಘು ಆಚಾರ್, ಏಪ್ರಿಲ್ 14 ರಂದು ಬೆಂಗಳೂರಿನ ಜೆ.ಪಿ ಭವನದಲ್ಲಿ ಬೇಷರತ್ತಾಗಿ ಜೆಡಿಎಸ್ ಸೇರ್ಪಡೆ ಆಗುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗದ ಆರು ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಲಿದೆ. ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ತಕ್ಕ ಉತ್ತರ ನೀಡುತ್ತೇನೆ ಎಂದರು.
ಇದನ್ನೂ ಓದಿ:ಸಿಗದ ಕಾಂಗ್ರೆಸ್ ಟಿಕೆಟ್; ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾದ ಹರಪಳ್ಳಿ ರವೀಂದ್ರ
Last Updated : Apr 7, 2023, 7:41 PM IST