ಚಿತ್ರದುರ್ಗ: ಕೆಎಸ್ಆರ್ಟಿಸಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ.
2019ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಂಚಾರಿ ನಿರೀಕ್ಷಕರು, ಸಹಾಯಕ ಸಂಚಾರಿ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ಈ ಕೃತ್ಯ ಎಸಗಿದ್ದಾರೆ. ಈ ಕುರಿತು ಹೊಸದುರ್ಗ ನಿವಾಸಿ ಅಭಿಷೇಕ್ ಅಕ್ಟೋಬರ್ 9 ರಂದು ಪೊಲೀಸರಿಗೆ ದೂರು ನೀಡಿದ್ದರು.
ಬಾದಾಮಿ ತಾಲೂಕಿನ ಕುಟುಕನಕೇರಿ ಗ್ರಾಮದ ಮಹಮದ್ ಅಲ್ಲಾ ಸಾಬ್, ಸುಭಾಷ್ ಕಾಲೋನಿಯ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ ಸೋಮಲಿಂಗಪ್ಪ ಅರಗಿನಶೆಟ್ಟಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಗಳಿ ತಾಂಡಾದ ಮಂಜುನಾಥ್ ಹಾಗು ಬೆಂಗಳೂರಿನ ಆರ್ಪಿಸಿ ಲೇಔಟ್ನ ಅನಿಲ್ ಕುಮಾರ್ ಬಂಧಿತರು.