ಚಿತ್ರದುರ್ಗ :ವಿದ್ಯಾರ್ಥಿನಿಯೊಬ್ಬಳು ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ ಪುಂಡರ ಗುಂಪೊಂದು ಕಿರುಕುಳ ನೀಡಿದ್ದನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪುಂಡರನ್ನು ಹೊಸದುರ್ಗ ಪೊಲೀಸರು ಬಂಧಿಸಿ ಕೈಗೆ ಕೋಳ ತೊಡಿಸಿದ್ದಾರೆ.
ಹೊಸದುರ್ಗ ತಾಲೂಕಿನ ಪಾಣಿಕಿಟ್ಟದಹಳ್ಳಿ ಗ್ರಾಮದ ಮುತ್ತು (21), ಶೀರನಕಟ್ಟೆ ಗ್ರಾಮದ ಸುದೀಪ (19), ಕೋಟಿ (19), ಅಭಿ (22) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ಕೈಗೆ ಕೋಳ ತೊಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಳೆದ ಏಳು ದಿನಗಳಿಂದ ಆರೋಪಿಗಳಿಗಾಗಿ ಬಲೆ ಬೀಸಿ ಇಂದು ಬಂಧಿಸಿದ್ದಾರೆ. ಆರೋಪಿಗಳು ಬಂಧಿಸಿರುವ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ವರಿಷ್ಠಾಧಿಕಾರಿ ಜಿ. ರಾಧಿಕಾ ಅಭಿನಂದಿಸಿದ್ದಾರೆ.
ಘಟನೆ ವಿವರ :ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ ಪುಂಡರ ಕಿರುಕುಳ ತಾಳಲಾರದೇ ಹೊಸದುರ್ಗ ತಾಲೂಕಿನ ಶೀರನಕಟ್ಟೆಯ ಕೋಡಿಹಳ್ಳಿಹಟ್ಟಿ ಗ್ರಾಮದ ಪ್ರಥಮ ಪಿಯುಸಿ ಓದುತ್ತಿದ್ದ ರಾಧಿಕಾ (17) ಎಂಬ ವಿದ್ಯಾರ್ಥಿ ಡಿಸೆಂಬರ್ 19ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು.