ಚಿತ್ರದುರ್ಗ: ಡಿಎಂಎಫ್ ಅನುದಾನದ ಮಾರ್ಗಸೂಚಿ ಪ್ರಕಾರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಡಿಎಂಎಫ್, ನಬಾರ್ಡ್ ಅನುದಾನ ಸೇರಿದಂತೆ ಎಲ್ಲಾ ಯೋಜನೆಗಳನ್ನು ಸೇರಿಸಿ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಯೋಜನೆ ರೂಪಿಸಬೇಕು ಎಂದು ಸಂಸದ ಎ. ನಾರಾಯಣಸ್ವಾಮಿ ಸೂಚನೆ ನೀಡಿದರು.
ಡಿಎಂಎಫ್‍ನಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ: ಸಂಸದ ಎ. ನಾರಾಯಣಸ್ವಾಮಿ
ಡಿಎಂಎಫ್ ಅನುದಾನದ ಮಾರ್ಗಸೂಚಿ ಪ್ರಕಾರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸಂಸದ ಎ. ನಾರಾಯಣಸ್ವಾಮಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಕಿಸಿಕೊಡುವ ಸಲುವಾಗಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಡಿಎಂಎಫ್, ನಬಾರ್ಡ್, ಜಿಲ್ಲಾ ಪಂಚಾಯತ್ ನರೇಗಾ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಒಟ್ಟಿಗೆ ಸೇರಿಸಿ ಶಾಲೆಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಬೇಕು. ಯೋಜನೆಗಳನ್ನು ಪ್ರತ್ಯೇಕಗೊಳಿಸಿದರೆ ಗುತ್ತಿಗೆದಾರರರಿಗೆ ಅನುಕೂಲವಾಗುತ್ತದೆ. ಹಾಗಾಗಿ ಎಲ್ಲಾ ಯೋಜನೆಗಳನ್ನು ಒಟ್ಟಿಗೆ ಸೇರಿಸಬೇಕು ಎಂದು ತಾಕೀತು ಮಾಡಿದರು.