ಕರ್ನಾಟಕ

karnataka

ETV Bharat / state

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ

ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಇಂದು ಅಧಿಸೂಚನೆ ಹೊರಡಿಸಲಾಗಿದೆ.

Chitradurga DC
Chitradurga DC

By

Published : Oct 1, 2020, 10:46 PM IST

ಚಿತ್ರದುರ್ಗ: ಆಗ್ನೇಯ ಪದವೀಧರರ ಮತಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ಇಂದು ಅಧಿಸೂಚನೆ ಹೊರಡಿಸಲಾಗಿದೆ. ಅ. 08 ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಚುನಾವಣೆಯ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಅ. 09 ರಂದು ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.12 ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ. ಅ.28 ರಂದು ಮತದಾನ ನಡೆಯಲಿದ್ದು, ನವೆಂಬರ್ 02 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಅಗ್ನೇಯ ಪದವೀಧರ ಕ್ಷೇತ್ರವು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ ಐದು ಜಿಲ್ಲೆಗಳನ್ನು ಒಳಗೊಂಡಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾ ಅಧಿಕಾರಿಗಳಾಗಿದ್ದು, ನಾಮಪತ್ರಗಳನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ಅಥವಾ ಪ್ರಾದೇಶಿಕ ಆಯುಕ್ತರ ಕಚೇರಿಯ ಸಹಾಯಕ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಬೇಕು.

ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳು ಈ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ 20,909 ಮತದಾರರಿದ್ದಾರೆ. ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 32 ಮತಗಟ್ಟೆಗಳಿವೆ. ಇದರಲ್ಲಿ ಮೊಳಕಾಲ್ಮುರು 03, ಚಳ್ಳಕೆರೆ 06, ಚಿತ್ರದುರ್ಗ 08, ಹಿರಿಯೂರು 06, ಹೊಸದುರ್ಗ 05, ಹೊಳಲ್ಕೆರೆ 04 ಮತಗಟ್ಟೆಗಳಿವೆ.

ABOUT THE AUTHOR

...view details