ಚಿತ್ರದುರ್ಗ:ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿ ಪಕ್ಷ ಸಮಾವೇಶಗಳನ್ನು ಕೈಗೊಂಡು ರಣಕಹಳೆ ಮೊಳಗಿಸಿದೆ.
ಗ್ರಾಮ ಪಂಚಾಯಿತಿಗಳಲ್ಲೂ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ತಂತ್ರಗಳನ್ನು ರೂಪಿಸುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹಾಗೂ ಹೊಳಲ್ಕೆರೆ ಮತ ಕ್ಷೇತ್ರಗಳಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಕಾರ್ಯಕ್ಕೆ ಮುಂದಾಗಿದೆ.
ಇಂದು ನಡೆದ ಸಮಾವೇಶದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ಆನಂದ್ ಸಿಂಗ್, ಸಂಸದ ಪ್ರತಾಪ್ ಸಿಂಹ, ಸಂಸದ ಎ.ನಾರಾಯಣ ಸ್ವಾಮಿ, ಶ್ರೀರಾಮುಲು ಭಾಗಿಯಾಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಳಲ್ಕೆರೆಯಿಂದ ರಣಕಹಳೆ ಊದಿದರು.
ನಾಳೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲೂ ಸಮಾವೇಶಗಳನ್ನು ಮಾಡಲಾಗುತ್ತಿದ್ದು, ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಸಮಾವೇಶ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದರು.