ಚಿತ್ರದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಧ ಗ್ರಾಪಂ ನೌಕರರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ವಿವಿಧ ಗ್ರಾಪಂ ನೌಕರರ ಆಗ್ರಹ - ಚಿತ್ರದುರ್ಗ ಗ್ರಾಪಂ ನೌಕರರಿಂದ ಪ್ರತಿಭಟನೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಧ ಗ್ರಾಪಂ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.
ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ನಡೆದ ಕಾಲ್ನಡಿಗೆ ಜಾಥಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯೂರಿನಿಂದ ಆರಂಭವಾದ ಕಾಲ್ನಡಿಗೆ ಜಾಥಾ ಚಿತ್ರದುರ್ಗ ತಲುಪಿ ಜಿಲ್ಲಾಧಿಕಾರಿ ವಿನೋತ್ ಪ್ರೀಯಾರವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾರವರು ಸಮಸ್ಯೆಗಳಿಗೆ ಪರಿಹಾರ ಸೂಚಿಸದೆ ಹಾಗೇ ನಡೆದರು. ಇದರಿಂದ ಆಕ್ರೋಶಗೊಂಡ ಗ್ರಾಪಂ ನೌಕರರು ಪರಿಹಾರ ಸೂಚಿಸುವಂತೆ ಸಂಜೆ ತನಕ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಶುಕ್ರವಾರ ತನಕ ಜಿಲ್ಲಾಧಿಕಾರಿಯವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ಕಾದು ನೋಡಿ ಬಳಿಕ ಬೆಂಗಳೂರಿಗೆ ಪಾದಯಾತ್ರೆ ಹೋಗಲು ನಿರ್ಧರಿಸಿದರು.