ಚಿತ್ರದುರ್ಗ: ಬರದನಾಡು ಚಿತ್ರದುರ್ಗದಲ್ಲಿ ಸತತ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಅಪಾರ ನಷ್ಟ ಉಂಟಾಗಿದೆ.
ಚಿತ್ರದುರ್ಗದಲ್ಲಿ ಭಾರೀ ಮಳೆ: ಅಡಿಕೆ ತೋಟಗಳಿಗೆ ನುಗ್ಗಿದ ನೀರು - Singapore Village in Holalkere Taluk
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, 25 ಎಕರೆಗೂ ಹೆಚ್ಚು ಅಡಿಕೆ ತೋಟದಲ್ಲಿ ನೀರು ನಿಂತಿದೆ. ಅಡಿಕೆ ತೋಟಕ್ಕೆ ನುಗ್ಗಿದ ಮಳೆ ನೀರಿನಿಂದ ಬೋರ್ವೆಲ್, ಅಡಿಕೆ ಸಸಿಗಳು, ಬಾಳೆ ಬೆಳೆ ಹಾನಿಯಾಗಿವೆ.
![ಚಿತ್ರದುರ್ಗದಲ್ಲಿ ಭಾರೀ ಮಳೆ: ಅಡಿಕೆ ತೋಟಗಳಿಗೆ ನುಗ್ಗಿದ ನೀರು Heavy rain in Chitradurga: nut plantation merged in water](https://etvbharatimages.akamaized.net/etvbharat/prod-images/768-512-8168370-704-8168370-1595674121715.jpg)
ಚಿತ್ರದುರ್ಗದಲ್ಲಿ ಭಾರೀ ಮಳೆ: 25 ಎಕರೆಗೂ ಹೆಚ್ಚು ಅಡಿಕೆ ತೋಟ ನೀರಿನಲ್ಲಿ ಮುಳುಗಡೆ
ಚಿತ್ರದುರ್ಗದಲ್ಲಿ ಭಾರೀ ಮಳೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, 25 ಎಕರೆಗೂ ಹೆಚ್ಚು ಅಡಿಕೆ ತೋಟದಲ್ಲಿ ನೀರು ನಿಂತಿದೆ. ಅಡಿಕೆ ತೋಟಕ್ಕೆ ನುಗ್ಗಿದ ಮಳೆ ನೀರಿನಿಂದ ಬೋರ್ವೆಲ್, ಅಡಿಕೆ ಸಸಿಗಳು, ಬಾಳೆ ಬೆಳೆ ಹಾನಿಯಾಗಿವೆ.
ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ, ಬ್ರಹ್ಮಪುರ, ಬಂಜಗೊಂಡನಹಳ್ಳಿ ಸುತ್ತಮುತ್ತ ಭಾರೀ ಮಳೆಯಾಗಿ ಈ ಅವಾಂತರಕ್ಕೆ ಕಾರಣವಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಿದ್ದಾರೆ.