ಕರ್ನಾಟಕ

karnataka

ETV Bharat / state

ಕೋಟೆನಾಡಿನಲ್ಲಿ ಹೊಸವರ್ಷ ಆಚರಣೆಗೆ ಖಾಕಿ ಕಣ್ಗಾವಲು - chitradurga new year celebration

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದ ರೀತಿ ಚಿತ್ರದುರ್ಗದಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಲಾಗಿದೆ.

chitradurga
ಹೊಸವರ್ಷ ಆಚರಣೆಗೆ ಖಾಕಿ ಕಣ್ಗಾವಲು

By

Published : Dec 31, 2019, 7:00 PM IST

ಚಿತ್ರದುರ್ಗ:ಹೊಸವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಚಿತ್ರದುರ್ಗ ಎಸ್​​​ಪಿ ಡಾ. ಅರುಣ್ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ನಗರದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಸೀದಿ, ದೇವಾಲಯಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗಿದ್ದು, ಬೆಳಗಿನ ಜಾವದ ಗಸ್ತು ತಿರುಗುವ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್ ತಿಳಿಸಿದರು.

ಹೊಸವರ್ಷ ಆಚರಣೆಗೆ ಖಾಕಿ ಕಣ್ಗಾವಲು

ಹೊಸವರ್ಷದ ರಾತ್ರಿ ವೇಳೆ ಕರ್ಕಶ ಶಬ್ಧದಿಂದ ಕೂಡಿದ ಬೈಕ್​​​ಗಳು ಹಾಗೂ ವ್ಹೀಲಿಂಗ್, ಮದ್ಯಪಾನ ಮಾಡಿ ಬೈಕ್ ಚಲಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗುತ್ತೇವೆ. ಈಗಾಗಲೇ ಸಂಭ್ರಮಾಚರಣೆ ಮಾಡುವ ವೇಳೆ ಮೈಕ್ ಬಳಕೆ ಮಾಡುವುದರ ಬದಲಾಗಿ ಕರ್ಕಶ ಶಬ್ದದಿಂದ ಕೂಡಿದ್ದ ಧ್ವನಿವರ್ಧಕಗಳನ್ನು ಬಳಕೆ ಮಾಡದಂತೆ ಮನವಿ ಮಾಡಿಕೊಂಡರು. ಇನ್ನೂ ಚಾಮರಾಜನಗರ ಜಿಲ್ಲೆಯ ಮೇಲೆ ಉಗ್ರರ ಕರಿ ನೆರಳು ಬೀಳುವ ಸಾಧ್ಯತೆ ಇದೆ ಎಂದು ಕೇಳಿ ಬಂದಿದ್ದು, ಅ ಜಿಲ್ಲೆಯಲ್ಲಿ ಸೇರಿದ್ದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭದ್ರತೆ ಒದಗಿಸುವಂತೆ ಇಲಾಖೆಯಿಂದ ಸುತ್ತೋಲೆ ಬಂದಿದೆ. ಆದರೆ ನಮ್ಮ ಜಿಲ್ಲೆಗೆ ಯಾವುದೇ ಉಗ್ರರ ಕರಿನೆರಳಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ ಆದರೂ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ರು.

ABOUT THE AUTHOR

...view details