ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿ ಮಾಡಿದ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ ಬಳಿ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ 50 ತಡೆದು ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಯ ಮುಖಂಡರು ಆಕ್ರೋಶ ಹೊರ ಹಾಕುತ್ತಿದ್ದಾರೆ. ರೈತ ಸಂಘ ಕೋಡಿಹಳ್ಳಿ ಬಣದ ಜಿಲ್ಲಾಧ್ಯಕ್ಷ ಚಿಕ್ಕಬ್ಬಿಗೆರೆ ನಾಗರಾಜ್ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.