ಚಿತ್ರದುರ್ಗ:ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಬಳಿ ನಿನ್ನೆ ಅಪಘಾತವಾಗಿ ನಿಂತಿದ್ದ ಲಾರಿಗೆ, ಇಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಒಬ್ಬ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಹೈವೇ ಪೋಲಿಸರ ಬೇಜವಾಬ್ದಾರಿತನಕ್ಕೆ ಮತ್ತೊಂದು ಬಲಿ! - ACCIDENT_1 DEATH_AV_7204336
ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಬಳಿ ನಿಂತಿದ್ದ ಲಾರಿಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಒಬ್ಬ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿನ್ನೆ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಇನೋವಾ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದರು. ನಿನ್ನೆ ಅಪಘಾತವಾದ ಲಾರಿಯನ್ನ ರಸ್ತೆಯಿಂದ ತೆರವುಗೊಳಿಸದ ಪರಿಣಾಮ ಇಂದು ಬೆಳಗ್ಗೆ ಅದೇ ಲಾರಿಗೆ KA 25 MB 4914 ನೋಂದಾಯಿತ ಎಕ್ಸೆಂಟ್ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಅರುಣ್ (25) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಚಾಲಕ ಪವನ್ , ಸದಾನಂದ, ಸಿರೀಶ್ಗೆ ಗಂಭೀರ ಗಾಯಗಳಾಗಿವೆ. ಮೃತ ಅರುಣ್ ಹುಬ್ಬಳ್ಳಿಯ ಮೂಲದವನೆಂದು ತಿಳಿದು ಬಂದಿದೆ.
ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
ACCIDENT_1 DEATH_AV_7204336