ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಸಮೀಪ ಹಿಟ್ ಅಂಡ್ ರನ್ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಿರಿಯೂರಿನಲ್ಲಿ ಹಿಟ್ ಅಂಡ್ ರನ್ ಕೇಸ್ : ಒಬ್ಬ ವ್ಯಕ್ತಿ ಸಾವು - ಹಿರಿಯೂರು
ಲಾರಿಯೊಂದು ಪಾದಚಾರಿಗೆ ಡಿಕ್ಕಿಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದಿದೆ.
ಹಿರಿಯೂರಿನಲ್ಲಿ ಹಿಟ್ ಆ್ಯಂಡ್ ರನ್ ಕೇಸ್ : ಓರ್ವ ವ್ಯಕ್ತಿ ಸಾವು
ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಘಟನೆ ಕಳೆದ ತಡ ರಾತ್ರಿ ಸಂಭವಿಸಿದ್ದು, ಅಪಘಾತಕ್ಕೆ ಕಾರಣರಾದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಬೆಂಗಳೂರಿನಿಂದ ಹುಬ್ಬಳಿ ಕಡೆ ಚಲಿಸುತ್ತಿದ್ದ ಲಾರಿ ಎಂದು ಸ್ಥಳೀಯರು ಹೇಳುತ್ತಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.