ಚಿತ್ರದುರ್ಗ :ಎಲ್ಲೆಡೆ ಕೊರೊನಾ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸಂಬಂಧಿತ ಕ್ರಮಗಳ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದೇನೆ.
ಅಲ್ಲದೆ ಬೇರೆ ರಾಜ್ಯದಿಂದ ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಚಿತ್ರದುರ್ಗದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ.. ಓದಿ: 14 ದಿನ ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ಇರಿ : ಜನತೆಗೆ ಗೃಹ ಸಚಿವ ಬೊಮ್ಮಾಯಿ ಮನವಿ
ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಅನಗತ್ಯವಾಗಿ ಓಡಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸುಲು ಸೂಚಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿ ಆರೋಗ್ಯದ ಬಗ್ಗೆ ಗಮನ ಹರಿಸಲಾಗಿದೆ ಎಂದರು.
ರಾಜ್ಯಕ್ಕೆ ಬೇಕಾಗುವಷ್ಟು ಕೋವಿಡ್ ಲಸಿಕೆಗೆ ಬೇಡಿಕೆ ಸಲ್ಲಿಸಿದ್ದೇವೆ. 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡುವುದು ತಡವಾಗುತ್ತದೆ. ಯಾಕೆಂದರೆ, ಮೊದಲು 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ಮುಂದುವರೆಯುತ್ತದೆ.
ಲಸಿಕೆ ಬಂದ ಬಳಿಕ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಮುಂದಿನ ದಿನಗಳಲ್ಲಿ ಲಸಿಕೆ ಆಗುವ ದಿನಾಂಕವನ್ನು ತಿಳಿಸುತ್ತೇವೆ ಎಂದು ಹೇಳಿದರು.