ಚಿತ್ರದುರ್ಗ:ಕೆಲ ದಿನಗಳ ಹಿಂದೆ ನಡೆದಿದ್ದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಪೊಲೀಸರು ಐವರು ಅಂತಾರಾಜ್ಯ ಖದೀಮರನ್ನು ಬಂಧಿಸಿದ್ದಾರೆ.
ತಿಪ್ಪೇಶ (22) , ಕಲ್ಲೇಶ (22), ರಮೇಶ (30),ಪ್ರಸಾದ್ (21), ರಾಮು (30) ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಆಂಧ್ರಪ್ರದೇಶದ ಅಮರಾಪುರ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ 1 ಲಕ್ಷ ರೂ. ನಗದು, 26 ಸಾವಿರ ರೂ. ಮೌಲ್ಯದ ದೇವರ ಬೆಳ್ಳಿ ಒಡವೆಗಳು, ಕೃತ್ಯಕ್ಕೆ ಬಳಸುತ್ತಿದ್ದ 5 ಮೋಟಾರ್ ಸೈಕಲ್‌ಗಳು ಸೇರಿದಂತೆ ಒಟ್ಟು 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.