ಚಿತ್ರದುರ್ಗ: ಕೇಂದ್ರದಿಂದ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಕ್ಕಾಗಿ ನಾನು ಬಹಿರಂಗವಾಗಿ ಕ್ಷಮೆಯಾಚಿಸುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು ಜಿಲ್ಲೆಯ ಹಿರಿಯೂರಿನಲ್ಲಿ ಇಂದಿರಾ ಕ್ಯಾಂಟಿನ್ ಉದ್ಧಾಟಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಅಥವಾ ಮೂರು ದಿನಗಳಲ್ಲಿ ಕೇಂದ್ರದಿಂದ ನೆರೆ ಪರಿಹಾದ ಹಣ ಬಿಡುಗಡೆಯಾಗುವ ವಿಶ್ವಾಸವಿದೆ. ಪ್ರಧಾನಿ ಅವರು ವಿದೇಶಿ ಪ್ರವಾಸದಲ್ಲಿ ಇದ್ದರು. ಹೀಗಾಗಿ ವಿಳಂಬವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಈಗಾಗಲೇ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ 3500 ಕೋಟಿ ಪರಿಹಾರ ಧನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ನಿಯಮಾನುಸಾರವಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದರು.
ನೆರೆ ಪರಿಹಾರದಲ್ಲಿ ಯಾರು ರಾಜಕೀಯ ಮಾಡಬಾರದು. ಪಕ್ಷಾತೀತವಾಗಿ ಎಲ್ಲರು ಸೇರಿ ಕೇಂದ್ರಕ್ಕೆ ನಿಯೋಗ ಹೋಗೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಈಚೆಗೆ ಕೇಂದ್ರ ಸರ್ಕಾರ ಇದ್ದೂ ಸತ್ತಂತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.