ಕರ್ನಾಟಕ

karnataka

ETV Bharat / state

ಲೋಕಸಭೆ ಚುನಾವಣೆ ಹಿನ್ನೆಲೆ ರಾಮ ಮಂದಿರ ಉದ್ಘಾಟನೆ : ಸಚಿವ ಡಿ ಸುಧಾಕರ್

ಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿಯವರು ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಸಚಿವ ಡಿ ಸುಧಾಕರ್​ ಹೇಳಿದ್ದಾರೆ.

By ETV Bharat Karnataka Team

Published : Dec 30, 2023, 4:42 PM IST

inauguration-of-ram-mandir-for-lok-sabha-elections-minister-d-sudhakar
ಲೋಕಸಭೆ ಚುನಾವಣೆ ಹಿನ್ನಲೆ ರಾಮ ಮಂದಿರ ಉದ್ಘಾಟನೆ : ಸಚಿವ ಡಿ ಸುಧಾಕರ್

ಲೋಕಸಭೆ ಚುನಾವಣೆ ಹಿನ್ನಲೆ ರಾಮ ಮಂದಿರ ಉದ್ಘಾಟನೆ : ಸಚಿವ ಡಿ ಸುಧಾಕರ್

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆ ಅಯೋಧ್ಯೆ ಮಂದಿರ ಉದ್ಘಾಟನೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ರಾಮಮಂದಿರ ಉದ್ಘಾಟನೆ ಒಂದು ಸ್ಟಂಟ್​ ಎಂದು ಬಿಜೆಪಿ ವಿರುದ್ಧ ಯೋಜನೆ ಮತ್ತು ಸಾಂಖಿಕ ಸಚಿವ ಡಿ ಸುಧಾಕರ್ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದರು. ಇದೀಗ ಶ್ರೀ ರಾಮನ ಫೋಟೋ ಹಿಡಿದಿದ್ದಾರೆ. ಜನರು ದಡ್ಡರಿಲ್ಲ, ಎರಡು ಸಲ ಮೂರ್ಖರಾಗಿದ್ದೇವೆ. ಮತ್ತೆ ಮೂರನೇ ಸಲ ಮೂರ್ಖರಾಗಲ್ಲ ಆಗಲ್ಲ ಎಂಬ ಭರವಸೆಯಿದೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆ ರಾಮಮಂದಿರ ಉದ್ಘಾಟನೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಅಯೋಧ್ಯೆ ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ಎಲ್ಲರೂ ದುಡ್ಡು ಕೊಟ್ಟಿದ್ದೇವೆ. ಹಿಂದೆ ರಾಮ ಮಂದಿರ ನಿರ್ಮಾಣಕ್ಕೆ ಇಟ್ಟಿಗೆಯನ್ನು ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು. ಎಲ್ಲಾ ಜನಾಂಗಕ್ಕೂ ರಾಮ ದೇವರು. ಇದರಲ್ಲಿ ಯಾವುದೇ ಭೇದಭಾವ ನಮ್ಮಲ್ಲಿಲ್ಲ ಎಂದು ಹೇಳಿದರು.

ಚುನಾವಣೆ ವೇಳೆ ಬಿಜೆಪಿಯವರು ದೇಗುಲ ಉದ್ಘಾಟನೆ ಗಿಮಿಕ್ ಮಾಡುತ್ತಿದ್ದಾರೆ. ಭಾರತ ದೇಶದ ಧಾರ್ಮಿಕ ನಂಬಿಕೆ ಬಳಸಿ ಬಿಜೆಪಿ ಮತ ಗಾಳ ಹಾಕುತ್ತಿದೆ. ಕಳೆದ ಚುನಾವಣೆಯಲ್ಲಿ ಎಲ್ಲಿತ್ತು ರಾಮ ಮಂದಿರ. ಪುಲ್ವಾಮ ದಾಳಿ ಬಗ್ಗೆ ಹೇಳಿದ್ದರು. ಈ ವೇಳೆ ಜನ ದೇಶ ಕಾಪಾಡುತ್ತಾರೆ ಎಂದು ನಂಬಿದರು. ಪುಲ್ವಾಮ ಘಟನೆಯಲ್ಲಿ ಎಷ್ಟು ಯೋಧರು ಹುತಾತ್ಮರಾದರು ಎಂದು ಪ್ರಶ್ನಿಸಿದರು.

ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈಗ ಜೆಡಿಎಸ್​ ಅವರ ಸೆಕ್ಯುಲರ್ ತತ್ವ ಎಲ್ಲಿ ಹೋಯಿತು?. ಬಿಜೆಪಿ ಆಡಳಿತಲ್ಲಿ ಭ್ರಷ್ಟಾಚಾರ ಎಂದು ಶಾಸಕ ಯತ್ನಾಳ್ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಅವರು ಎಲ್ಲಿವರೆಗೆ ಇದನ್ನೆಲ್ಲ ನೋಡಿಕೊಂಡಿರುತ್ತಾರೆ. 40 ಪರ್ಸೆಂಟ್ ಸರ್ಕಾರ ಎಂದೇ ಕುಖ್ಯಾತಿ ಗಳಿಸಿದ್ದು ಸತ್ಯ. ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ನೋಡಿಯೇ ಜನರು ರಾಜ್ಯದಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದಾರೆ ಎಂದು ಹೇಳಿದರು.

ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರದ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಾವು ಶಾಲಾ ವಿದ್ಯಾರ್ಥಿಯಾಗಿದ್ದಾಗ ಕಸ ಗುಡಿಸಿದ್ದೇವೆ. ಆದರೆ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛ ಮಾಡಿಸಿರುವುದು ಸರಿಯಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ :ನಿಗಮ ಮಂಡಳಿ ನೇಮಕದಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ: ಡಿಸಿಎಂ ಡಿ ಕೆ ಶಿವಕುಮಾರ್

ABOUT THE AUTHOR

...view details