ಚಿತ್ರದುರ್ಗ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಡಿಸಿ ಕಚೇರಿ ವೃತ್ತಕ್ಕೆ ತಲುಪಿತು. ಬಳಿಕ ರಸ್ತೆಯಲ್ಲೇ ಕಾರ್ಯಕರ್ತರು ಧರಣಿ ಕುಳಿತರು.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ - ಸರ್ಕಾರದ ವಿರುದ್ಧ ಪ್ರತಿಭಟನೆ
ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ಪ್ರತಿಭಟನೆ
ರಾಜ್ಯ ಸರ್ಕಾರ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ. ಗ್ರಾಮೀಣ ಭಾಗದಲ್ಲಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ನಿಪ್ಪಾಣಿಗೆ ಸ್ಥಳಾಂತರಿಸಿದ್ದು ಮತ್ತು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.