ಚಿತ್ರದುರ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ನಲ್ಲಿ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಆರು ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಚಿತ್ರದುರ್ಗದ ಮದಕರಿಪುರ, ಗೋಡಬನಾಳ್, ಚಳ್ಳಕೆರೆಯ ಕಾಲುವೇಹಳ್ಳಿ, ಎನ್ ದೇವರಹಳ್ಳಿ, ಗೌರ ಸಮುದ್ರ ಮತ್ತು ಮೊಳಕಾಲ್ಮೂರಿನ ಜೆಬಿ ಹಳ್ಳಿಗಳಲ್ಲಿ ತಲಾ ಒಂದರಂತೆ ಖಾಲಿ ಇರುವ ಒಟ್ಟು 6 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ.
ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.