ಚಿತ್ರದುರ್ಗ: ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮೀಸಲು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
’ಕಾಡುಗೊಲ್ಲ ಸಮುದಾಯ'ಕ್ಕೆ ಎಸ್ಟಿ ಮೀಸಲಿಗೆ ಆಗ್ರಹ: ಉರುಳು ಸೇವೆ ಪ್ರತಿಭಟನೆ - Dharwad
ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮಾನ್ಯತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
'ಕಾಡುಗೊಲ್ಲ ಸಮುದಾಯ'ಕ್ಕೆ ಎಸ್ಟಿ ಮೀಸಲಾತಿಗೆ ಆಗ್ರಹಿಸಿ ಉರುಳುಸೇವೆ ಪ್ರತಿಭಟನೆ
ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ 20ಕ್ಕೂ ಅಧಿಕ ಜನರು ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮಾನ್ಯತೆ ನೀಡುವಂತೆ ಆಗ್ರಹಿಸಿದರು.
ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಕಾಡುಗೊಲ್ಲ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಹಾಗಾಗಿ ಸಮಾಜದಲ್ಲಿ ಹಿಂದುಳಿದ ಕಾಡುಗೊಲ್ಲ ಸಮುದಾಯಕ್ಕೆ ಸರ್ಕಾರ ಕೂಡಲೇ ಮೀಸಲಾತಿ ನೀಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಚಿತ್ರದುರ್ಗ, ತುಮಕೂರು ಸೇರಿದಂತೆ ಹಲವು ಭಾಗದ ಜನರು ಭಾಗಿಯಾಗಿದ್ದರು