ಕರ್ನಾಟಕ

karnataka

ETV Bharat / state

ಚಿತ್ರದುರ್ಗ: ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯರ್ತರು

ಮರಾಠ ಸಮುದಾಯದ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಇಂದು ಜಿಲ್ಲೆಯಲ್ಲಿ ಪ್ರವೀಣ್​ ಶೆಟ್ಟಿ ಬಣದ ಕಾರ್ಯಕರ್ತರು ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

By

Published : Dec 5, 2020, 2:45 PM IST

Karave activists protested in Chitradurga
ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯರ್ತರು

ಚಿತ್ರದುರ್ಗ:ಮರಾಠ ಸಮುದಾಯದ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂಪಡೆಯುವಂತೆ ಒತ್ತಾಯಿಸಿ, ಪ್ರವೀಣ್​ ಶೆಟ್ಟಿ ಬಣದ ಕಾರ್ಯಕರ್ತರು ಅರೆ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಅರೆಬೆತ್ತಲೆಯಾಗಿ ಪ್ರತಿಭಟನೆದ ಕರವೇ ಕಾರ್ಯಕರ್ತರು

ನಗರದದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಓಬ್ಬವ್ವ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರಾಧಿಕಾರ ರಚನೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಡಿಸಿಗೆ ಮನವಿ ಸಲ್ಲಿಸಿದರು. ಬಳಿಕ ಕಾರ್ಯಕರ್ತರು ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಕಾರ್ಯಕರ್ತರು ಅರಬೆತ್ತಲೆಯಾಗಿ ಧರಣಿ ನಡೆಸಲು ಮುಂದಾದರು. ಈ ವೇಳೆ, ಪೊಲೀಸರು 30 ಕಾರ್ಯಕರ್ತರುನ್ನು ವಶಕ್ಕೆ ಪಡೆದುಕೊಂಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪ್ರತಿಭಟನೆ:

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರ ಪ್ರತಿಭಟನೆ

ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವುದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ‌. ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುವ ಎಂಇಎಸ್ ಪರವಾಗಿ ರಾಜ್ಯ ಸರ್ಕಾರ ನಿಲ್ಲುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಇದನ್ನೂ ಓದಿ:ಚಿತ್ರದುರ್ಗ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ​​ ಸವಾರ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು 20ಕ್ಕೂ ಅಧಿಕ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸಂಚಾರ ಸುಗಮಗೊಳಿಸಿದರು.

ABOUT THE AUTHOR

...view details