ಚಿತ್ರದುರ್ಗ:ಆರೋಗ್ಯ ಸಚಿವ ಹಾಗು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಾಮುಲು ಅವರು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ನವ ನಿರ್ಮಾಣ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಗೆ ಸರಿಯಾಗಿ ಭೇಟಿ ನೀಡದೆ ಸಚಿವರು ಉದ್ಧಟತನ ಮೆರೆಯುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಲಾಯಿತು. ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾಕಷ್ಟು ಜನ ಭಾಗವಹಿಸಿ ಸಚಿವ ಶ್ರೀ ರಾಮುಲುರವರ ನಡೆಯನ್ನು ಖಂಡಿಸಿದರು.
ಕರ್ನಾಟಕ ನವ ನಿರ್ಮಾಣ ವೇದಿಕೆಯಿಂದ ಪ್ರತಿಭಟನೆ ಇನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಬೇಕು ಜೊತೆಗೆ ಜಿಲ್ಲೆಯ ಬಸವೇಶ್ವರ ಆಸ್ಪತ್ರೆ ಹಾಗು ಇನ್ನಿತರ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕೆಂದು ಮನವಿ ಮಾಡಲಾಯಿತು.
ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಬೆಡ್ಗಳ ಕೊರತೆ ಎದುರಾಗುವ ಮುನ್ನ ಈ ಕ್ರಮಕ್ಕೆ ಮುಂದಾಗಿ ಎಂದು ಒತ್ತಾಯಿಸಲಾಯಿತು. ಬಳಿಕ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.