ಕರ್ನಾಟಕ

karnataka

ETV Bharat / state

ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡದಲ್ಲಿವೆ ಉದ್ಯೋಗಾವಕಾಶ - ಗ್ರಾಮೀಣ ಪ್ರದೇಶದವರ ಕಲ್ಯಾಣ ಕಾರ್ಯಕ್ರಮ

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್​ನಲ್ಲಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

KSRLPS Vacancy in Tumakuru Chitradurga and  Dakshina Kannada
KSRLPS Vacancy in Tumakuru Chitradurga and Dakshina Kannada

By

Published : Jun 1, 2023, 2:01 PM IST

ಗ್ರಾಮೀಣ ಪ್ರದೇಶದ ಬಡವರಿಗೆ ಸುಸ್ಥಿರ ಜೀವನೋಪಾಯವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಕೆ.ಎಸ್.ಆರ್.ಎಲ್.ಪಿ.ಎಸ್)​ ಅನ್ನು ಜಾರಿಗೆ ತಂದಿದೆ. ಇದರ ಮೂಲಕ ಎಲ್ಲ ರಾಜ್ಯಗಳಲ್ಲಿ ಗ್ರಾಮೀಣ ಪ್ರದೇಶದವರ ಕಲ್ಯಾಣ ಕಾರ್ಯಕ್ರಮಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಇದೀಗ ಆ ಯೋಜನೆಯ ಭಾಗವಾಗಿ ಕೆಲಸ ಮಾಡಲು ರಾಜ್ಯದಲ್ಲಿ ವಿವಿಧ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಈ ಮಿಷನ್​ ಅಡಿಯಲ್ಲಿ ರಾಜ್ಯದ ಚಿತ್ರದುರ್ಗ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ತುಮಕೂರು, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ತಾಲೂಕಿನಲ್ಲಿ ಆಫೀಸ್​ ಅಸಿಸ್ಟೆಂಟ್​, ಜಿಲ್ಲಾ ಕಾರ್ಯಕ್ರಮ ನಿರ್ವಾಹಕ, ಆಫೀಸ್​ ಅಸಿಸ್ಟೆಂಟ್​ ಹಾಗೂ ಕ್ಲಸ್ಟರ್​ ಸೂಪರ್​ವೈಸರ್​, ಬ್ಲಾಕ್​ ಕೋರ್ಡಿನೇಟ್​ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಒಟ್ಟು 57 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಎಂಎಸ್​ಡಬ್ಲ್ಯೂ, ಬಿಎಸ್ಸಿ ಅಗ್ರಿಕಲ್ಚರ್​ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳ ವಯೋಮಿತಿ ನೀಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಿ, ಅಭ್ಯರ್ಥಿಗಳು ಮುಂದುವರೆಯಬಹುದು.

ಅರ್ಜಿ ಸಲ್ಲಿಕೆ:ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಸಾಧ್ಯ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳನ್ನು ಮೇಲ್ಕಂಡ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಕೆಳಗೆ ನೀಡಿದ ಅಧಿಕೃತ ಜಾಲತಾಣಕ್ಕೆ ಲಾಗಿನ್​ ಆಗುವ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ನಿಯಮಾವಳಿಗಳನ್ನು ಪರಿಶೀಲನೆ ಮಾಡಿ ಭರ್ತಿ ಮಾಡಬೇಕಿದೆ. ಅಭ್ಯರ್ಥಿಗಳು ಈಗಾಗಲೇ ಈ ಕ್ಷೇತ್ರದಲ್ಲಿ ಅನುಭವ ಹೊಂದಿದ್ದರೆ, ಅವರಿಗೆ ವಿಶೇಷ ಮಾನ್ಯತೆ ಸಿಗಲಿದೆ. ಅರ್ಜಿ ಸಲ್ಲಿಸುವಾಗ ಸರಿಯಾದ ದಾಖಲಾತಿಗಳನ್ನು ಭರ್ತಿ ಮಾಡುವುದು ಅವಶ್ಯಕವಾಗಿದೆ. ಈ ಮೇಲ್ಕಂಡ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಕೆಲವು ಹುದ್ದೆಗಳಿಗೆ ಜೂನ್​ 2, ಜೂನ್​ 3 ಮತ್ತು ಜೂನ್​ 7 ಆಗಿದೆ.

ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಈ jobsksrlps.karnataka.gov.in/viewjobs-new.aspxಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕುರಿತು..: ಕೇಂದ್ರ ಸರ್ಕಾರದ ಈ ಯೋಜನೆಯನ್ನು ರಾಜ್ಯ ಸರ್ಕಾರವು ರಾಜ್ಯದಲ್ಲಿ 'ಸಂಜೀವಿನಿ' ಹೆಸರಿನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (ಕೆ.ಎಸ್.ಆರ್.ಎಲ್.ಪಿ.ಎಸ್) ಮೂಲಕ ಹಂತ ಹಂತವಾಗಿ ರಾಜ್ಯದಲ್ಲಿ ಜಾರಿಗೊಳಿಸುತ್ತಿದೆ. ಈ ಮೂಲಕ ಗ್ರಾಮೀಣ ಜನರ ಸುಸ್ಥಿರ ಬದುಕಿಗೆ ಕಾರ್ಯ ನಿರ್ವಹಿಸಲಾಗುತ್ತಿದೆ.

ಇದನ್ನೂ ಓದಿ: ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿದೆ ಉದ್ಯೋಗ: ಜವಾನ, ಟೈಪಿಸ್ಟ್​, ಸ್ಟೆನೋಗ್ರಾಫರ್‌ಗೆ ಅರ್ಜಿ ಆಹ್ವಾನ

ABOUT THE AUTHOR

...view details