ಕರ್ನಾಟಕ

karnataka

ETV Bharat / state

ಕಾನೂನು ಪದವಿ ಪರೀಕ್ಷೆ ರದ್ದು ಪಡಿಸುವಂತೆ ಪ್ರತಿಭಟನೆ - ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವತಿಯಿಂದ ಪರೀಕ್ಷೆ ನಡೆಸಲು ಮುಂದಾಗಿರುವ ಕ್ರಮವನ್ನು ಹಿಂಪಡೆಯಬೇಕೆಂದು ಭಾರತೀಯ ವಿದ್ಯಾರ್ಥಿ ಫೆಡರೇಷೆನ್ ವತಿಯಿಂದ ಸರ್ಕಾರಕ್ಕೆ ಒತ್ತಾಯಿಸಲಾಯಿತು.

Protest
Protest

By

Published : Aug 17, 2020, 6:05 PM IST

ಚಿತ್ರದುರ್ಗ: ಕಾನೂನು ಪದವಿಗಳ ಪರೀಕ್ಷೆ ರದ್ದು ಪಡಿಸುವಂತೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಎಸ್ಐಎಫ್ ಸಂಘಟನೆ ವತಿಯಿಂದ ಡಿಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಾಕಷ್ಟು ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಕೇರಳ ಹಾಗು ತಮಿಳುನಾಡು ವ್ಯಾಪ್ತಿಯಲ್ಲಿ ಬರುವ ಕಾನೂನು ಪದವಿಯ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿ ಅವರ ವಿದ್ಯಾರ್ಥಿಗಳ ಕಾಲೇಜಿನಲ್ಲಿ ನಡೆದ ಕಿರುಪರೀಕ್ಷೆಯ ಆಧಾರ ಮೇಲೆ ವಿದ್ಯಾರ್ಥಿಗಳನ್ನು ಗ್ರೇಡ್ ಕೊಟ್ಟು ಉತ್ತೀರ್ಣ ಮಾಡಲು ಆದೇಶ ನೀಡಿದೆ‌. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವತಿಯಿಂದ ಪರೀಕ್ಷೆ ನಡೆಸಲು ಮುಂದಾಗಿರುವ ಕ್ರಮವನ್ನು ಹಿಂಪಡೆಯಬೇಕೆಂದು ಭಾರತೀಯ ವಿದ್ಯಾರ್ಥಿ ಫೇಡರೇಷೆನ್ ವತಿಯಿಂದ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ಪರೀಕ್ಷೆಗಳನ್ನು ನಡೆಸಿದರೆ ಪರೀಕ್ಷಾ ಶುಲ್ಕವನ್ನು ಪಾವತಿಸದೆ ವಿದ್ಯಾರ್ಥಿಗಳು ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ‌ ಎಚ್ಚರಿಕೆ ನೀಡಿದರು.

ABOUT THE AUTHOR

...view details