ಚಿತ್ರದುರ್ಗ : ಕೋಟೆನಾಡಿನಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ಹೊಳಲ್ಕೆರೆ ತಾಲ್ಲೂಕಿನ ಗಾದ್ರಿಗುಡ್ಡ ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಗಾದ್ರಿಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ - ಚಿತ್ರದುರ್ಗ ಚಿರತೆ ಸುದ್ದಿ
ಹೊಳಲ್ಕೆರೆ ತಾಲ್ಲೂಕಿನ ಗಾದ್ರಿಗುಡ್ಡ ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.
ಚಿರತೆ ಪ್ರತ್ಯಕ್ಷ
ನಿರ್ಭಯವಾಗಿ ಚಿರತೆ ಓಡಾಡುತ್ತಿರುವ ದೃಶ್ಯ ದಾರಿಹೋಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಮನೆಯಿಂದ ಹೊರಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿಯಬೇಕೆಂದು ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.