ಚಿತ್ರದುರ್ಗ: ವಿಧಾನಸಭಾ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧಿಸಿದಂತೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಅಂತಿಮ ಪಟ್ಟಿಯನ್ನು ಪ್ರಚುರಪಡಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13,60,688 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ - ಚಿತ್ರದುರ್ಗ ವಿಧಾನಸಭಾ ಕ್ಷೇತ್ರ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಿಮ ಮತದಾರರ ಪಟ್ಟಿ ಪ್ರಕಟ ಕುರಿತು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಮಾತನಾಡಿ, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ವಯವಿರುವ ಮತದಾರರ ಸಂಖ್ಯಾವಾರುಗಳನ್ನು ವಿವರಿಸಿದರು.
![ಚಿತ್ರದುರ್ಗ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ list-of-final-voters-in-chitradurga-assembly-constituency](https://etvbharatimages.akamaized.net/etvbharat/prod-images/768-512-5993153-thumbnail-3x2-dc.jpg)
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಿಮ ಮತದಾರರ ಪಟ್ಟಿ ಪ್ರಕಟ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ವಯ ಒಟ್ಟು 13,43,207 ಮತದಾರರು ಇದ್ದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ
ಫೆ.7 ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 13,60,688 ಮತದಾರರು ಇದ್ದಾರೆ. ಅಂತಿಮ ಮತದಾರರನ್ವಯ ಜಿಲ್ಲೆಯಲ್ಲಿನ 1648 ಮತಗಟ್ಟೆಗಳ ವ್ಯಾಪ್ತಿಯಲ್ಲಿ 683572 ಪುರುಷ ಮತದಾರರು, 677029 ಮಹಿಳಾ ಮತದಾರರು ಹಾಗೂ 87 ಇತರೆ ವರ್ಗದ ಮತದಾರರಿದ್ದಾರೆ ಎಂದು ವಿವರಿಸಿದರು.
TAGGED:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ