ಸಾರ್ವಜನಿಕರ ಕುಂದುಕೊರತೆ ಆಲಿಸಲು ಶಿಕ್ಷಕರ ನಿಯೋಜನೆ - Teacher placement for listen to the public problem
ಲಾಕ್‍ಡೌನ್ ಸಮಯದಲ್ಲಿ ಅಗತ್ಯ ಪದಾರ್ಥ ವಿತರಣೆ, ಕುಡಿಯುವ ನೀರು ಸರಬರಾಜು ಹಾಗೂ ವೈದ್ಯಕೀಯ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಆಲಿಸಿ, ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳು ಹಾಗೂ ನಗರ ಪ್ರದೇಶದ ವಾರ್ಡ್‍ಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರ ಕುಂದು ಕೊರತೆ ಆಲಿಸಲು ಶಿಕ್ಷಕರ ನಿಯೋಜನೆ
ಚಿತ್ರದುರ್ಗ: ಕೋವಿಡ್-19 ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ, ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳು ಹಾಗೂ ನಗರ ಪ್ರದೇಶದ ವಾರ್ಡ್‍ಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಜಿಲ್ಲೆಯ 6 ತಾಲ್ಲೂಕಿನಲ್ಲೂ ಶಿಕ್ಷಕರನ್ನು ನೇಮಿಸಲಾಗಿದ್ದು, ಪ್ರತಿ ತಾಲ್ಲೂಕಿನಲ್ಲಿ ಸುಮಾರು 200-250 ಜನ ಶಿಕ್ಷಕರು ಕಳೆದ ಒಂದು ವಾರದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮ ವ್ಯಾಪ್ತಿಯ ಪ್ರದೇಶದ ಜನರ ಕುಂದು ಕೊರತೆಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಇಲಾಖೆಗೆ ಸಮಸ್ಯೆ ತಿಳಿಸುತ್ತಾರೆ. ಆಯಾ ಇಲಾಖೆಯವರು ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಿದ ಬಗೆ ಕುರಿತು ಶಿಕ್ಷಕರಿಗೆ ಮಾಹಿತಿ ನೀಡುತ್ತಾರೆ.