ಚಿತ್ರದುರ್ಗ :ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿಯ ಎಹೆಚ್ 48 ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರು ಬೆಂಗಳೂರು ವೈಟ್ಫೀಲ್ಡ್ ಮೂಲದ ಶಿವರಾಮ್ (45) ಹಾಗೂ ಚೇತನ್ ಕುಮಾರ್ (30) ಎಂದು ತಿಳಿದು ಬಂದಿದೆ.
ಲಾರಿ ಇನೋವಾ ಕಾರು ಅಪಘಾತ : ಇಬ್ಬರು ಸಾವು - ಚಿತ್ರದುರ್ಗದಲ್ಲಿ ಅಪಘಾತ
ಕಾರು ಚಾಲಕನ ಅತೀವೇಗದಿಂದಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ..
ಲಾರಿ ಇನೋವಾ ಕಾರು ಅಪಘಾತ
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಸಮಯದಲ್ಲಿ ಈ ಅವಘಡ ನಡೆದಿದೆ. ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನೋವಾ ಕಾರಿನ ಚಾಲಕನ ಅತಿವೇಗ ಅಪಘಾತಕ್ಕೆ ಕಾರಣವಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.