ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್ ಲಾರಿ ಗುದ್ದಿದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು - ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ಲಾರಿ ಅಪಘಾತ
ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್ ಲಾರಿ ಗುದ್ದಿದ್ದು, ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಂಟೇನರ್ ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ತಮಿಳುನಾಡು ಮೂಲದ ಲಾರಿ ಚಾಲಕ ಕವಿ ಅರಸನ್ (44) ಸಾವನ್ನಪ್ಪಿದವ. ಮತ್ತೋರ್ವ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಆಂಧ್ರದ ಶ್ರೀಶೈಲಂನಲ್ಲಿ ಕನ್ನಡಿಗರು, ಸ್ಥಳೀಯರ ನಡುವೆ ಘರ್ಷಣೆ: ವಾಹನಗಳು, ಅಂಗಡಿಗಳಿಗೆ ಹಾನಿ