ಚಿತ್ರದುರ್ಗ:ಸರ್ಕಾರಿ ಭೂಮಿಯಲ್ಲಿ ಬೆಳೆಗಳ ಮಧ್ಯೆ ಅಕ್ರಮವಾಗಿ ಬೆಳೆದಿದ್ದ 20 ಕೆ.ಜಿ. ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಿದ್ದಪ್ಪನಹಟ್ಟಿಯಲ್ಲಿ ಈ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ ಪಡೆದು ಆರೋಪಿಗೆ ಶೋಧ ನಡೆಸಿದ್ದಾರೆ. ಸಿದ್ದಪ್ಪನಹಟ್ಟಿ ಗ್ರಾಮದ ನಿವಾಸಿ ಅಂಜನಪ್ಪ ಎಂಬಾತ ಸರ್ಕಾರಿ ಭೂಮಿಯಲ್ಲಿ ಬೆಳೆಗಳ ಮಧ್ಯೆ ಗಾಂಜಾ ಬೆಳೆದಿದ್ದಾನೆ.