ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಇಬ್ಬರ ದುರ್ಮರಣ
12:15 December 21
ಚಿತ್ರದುರ್ಗದ ಹಿರಿಯೂರು ತಾಲೂಕಿನ ಮಾದೇನಹಳ್ಳಿ ಗೇಟ್ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಚಾಲಕರು ಮೃತಪಟ್ಟಿದ್ದಾರೆ.
ಚಿತ್ರದುರ್ಗ:ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಮಾದೇನಹಳ್ಳಿ ಗೇಟ್ ಬಳಿ ನಡೆದಿದೆ.
ಹುಳಿಯಾರು ಕಡೆಯಿಂದ ಬರುತ್ತಿದ್ದ ಲಾರಿ TN 37, DU 6115 ಹಾಗೂ ಹಿರಿಯೂರು ಮಾರ್ಗದಿಂದ ಬರುತ್ತಿದ್ದ ಇನ್ನೊಂದು ಲಾರಿ KA06, B 2669 ಮುಖಾಮುಖಿಯಾಗಿವೆ ಎಂದು ಹೇಳಲಾಗುತ್ತಿದೆ. ಲಾರಿ ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿಗಳ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.