ಚಿತ್ರದುರ್ಗ: ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಲಾಕ್ಡೌನ್ ಮಾಡಲಾಗಿದೆ. ಹಾಗೆಯೇ ಚಿತ್ರದುರ್ಗ ತಾಲೂಕನ್ನೂ ಲಾಕ್ಡೌನ್ ಮಾಡಲು ಚಿಂತನೆ ನಡೆದಿದೆ.
ಚಿತ್ರದುರ್ಗ ನಗರ ಲಾಕ್ಡೌನ್ ಮಾಡಲು ಚಿಂತನೆ - Chitradurga district news
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಲಾಕ್ಡೌನ್ ಸಂಬಂಧ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಎಲ್ಲಾ ವ್ಯಾಪಾರ ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆದಿದ್ದರು.
ಲಾಕ್ಡೌನ್ ಸಂಬಂಧ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನಗರದ ಪ್ರವಾಸಿ ಮಂದಿರದಲ್ಲಿ ಎಲ್ಲಾ ವ್ಯಾಪಾರ ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆದಿದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವ್ಯಾಪಾರಸ್ಥರಿಂದ ಲಾಕ್ಡೌನ್ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.
ಸಭೆಯಲ್ಲಿ 50ಕ್ಕೂ ಹೆಚ್ಚು ವಿವಿಧ ಸಂಘಗಳು ಹಾಗೂ ನೂರಕ್ಕೂ ಹೆಚ್ಚು ವ್ಯಾಪಾರಸ್ಥರು ಭಾಗಿಯಾಗಿದ್ದರು. ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ ಐದರ ತನಕ ಪ್ರತಿದಿನ ಲಾಕ್ಡೌನ್ ಮಾಡುವಂತೆ ಶಾಸಕರಿಗೆ ತಮ್ಮ ಅಭಿಪ್ರಾಯ ತಿಳಿಸಿದರು. ಅಭಿಪ್ರಾಯ ಸಂಗ್ರಹಿಸಿದ ತಿಪ್ಪಾರೆಡ್ಡಿ, ಜಿಲ್ಲಾಡಳಿತ ಸೇರಿದಂತೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.