ಚಿತ್ರದುರ್ಗ:ಖಾತೆ ಬದಲಾವಣೆ ಮಾಡುವಾಗ ಎಲ್ಲರಿಗೂ ಅಸಮಾಧಾನ ಇದ್ದೇ ಇರುತ್ತೆ. ಸಚಿವ ಮಾಧುಸ್ವಾಮಿ ಹಾಗೂ ಆನಂದ ಸಿಂಗ್ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಹಾಗೂ ಆನಂದ ಸಿಂಗ್ ಅವರು ಸಚಿವ ಸ್ಥಾನ ಬದಲಾವಣೆ ಮಾಡಿರುವುದಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಹೇಳಿರುವುದಕ್ಕೆ, ಸಿಎಂ ಅವರನ್ನು ಕರೆದು ಚರ್ಚೆ ಮಾಡಿದ್ದಾರೆ ಎಂದರು.