ಚಿತ್ರದುರ್ಗ:ಮೀಸಲಾತಿ ವಿಚಾರವಾಗಿ ಯಾವುದೇ ಸಮುದಾಯಗಳಿಗೆ ಅನ್ಯಾಯವಾಗಿದ್ದರೆ ಅದನ್ನು ನಮ್ಮ ಸರ್ಕಾರ ಸರಿಪಡಿಸಲಿದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಮೀಸಲಾತಿಯಲ್ಲಿ ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸಲಾಗುವುದು; ಸಚಿವ ಗೋಪಾಲಯ್ಯ - Minister Gopalyya
ಹಿಂದುಳಿದ ವರ್ಗಗಳ ಮೀಸಲಾತಿ ನೀಡುವ ಕೆಲಸ ನಮ್ಮ ಮುಖ್ಯಮಂತ್ರಿ, ಪ್ರಧಾನಿ ಮಾಡುತ್ತಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಸಚಿವ ಗೋಪಾಲಯ್ಯ
ಹೊಸದುರ್ಗ ತಾಲೂಕಿನ ಮದುರೆ ಗ್ರಾಮದಲ್ಲಿ ಮಾತನಾಡಿದ ಅವರು, ಯಾವ ಸಮುದಾಯಗಳಿಗೆ ಮೀಸಲಾತಿ ನೀಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಸಮುದಾಯಗಳಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷವೆಂದರೆ ಅದು ಬಿಜೆಪಿ ಮಾತ್ರ.
ಮದ್ಯದಂಗಡಿಗಳ ಸ್ಥಳಾಂತರಕ್ಕೆ ಕಾನೂನಿನಲ್ಲಿ ಅವಕಾಶ ಇದ್ದರೆ ಮಾತ್ರ ಮಾಡಬೇಕು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಸ್ಥಳಾಂತರ ಆರೋಪ ಕುರಿತಾಗಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.