ಚಿತ್ರದುರ್ಗ :ರಾಜ್ಯದಲ್ಲಿ ವಿಮಾನಯಾನ ಬಂದ್ ಆದ ಬಳಿಕ ನಿಟ್ಟುಸಿರು ಬಿಟ್ಟಿದ್ದೆವು. ಆದರೆ, ದೆಹಲಿ ನಿಜಾಮುದ್ದೀನ್ ಸಭೆ ಬಳಿಕ ಆತಂಕ ಸೃಷ್ಟಿ ಆಯಿತು. ತಬ್ಲಿಘಿ ಜಮಾತ್‌ನವರನ್ನು ವಾರಿಯರ್ಸ್ ಎಂದು ಒಪ್ಪುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗವಿಕಲರು ಹಾಗೂ ಗ್ರಾಮ ಪಂಚಾಯತ್‌ನ ಸ್ವಚ್ಛತಾಗಾರರಿಗೆ ದಿನಸಿ ಸಾಮಾಗ್ರಿ ಕಿಟ್ ವಿತರಿಸಿದ ಬಳಿಕ ಮಾತನಾಡಿದ ಅವರು, ಪೊಲೀಸರು, ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪತ್ರಕರ್ತರು ಫ್ರೆಂಟ್‌ಲೈನ್ ವಾರಿಯರ್ಸ್ ಆಗಿದ್ದಾರೆ. ಜೀವದ ಹಂಗು ತೊರೆದು ಜನರ ಹಿತಕ್ಕಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.