ಚಿತ್ರದುರ್ಗ:ಎಂಇಎಸ್ ಪುಂಡಾಟಿಕೆ ಸಾಕಷ್ಟು ವರ್ಷಗಳಿಂದ ನಡೆಯುತ್ತಲೇ ಇದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ. ಎಂಇಎಸ್ನವರು ಮತ್ತೆ ಹಳೇ ಚಾಳಿ ಮುಂದುವರಿಸಿದ್ದು, ನಾವು ಇಂತಹ ಪರಿಸ್ಥಿತಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನೆಲ, ಜಲ, ಭಾಷೆ ವಿಚಾರ ಬಂದಾಗ ಯಾವುದೇ ಕಾರಣಕ್ಕೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಗಡಿ ವಿಚಾರಬೇ ಆಗಿರಬಹುದು, ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಖಡಕ್ ಸಂದೇಶ ರವಾನಿಸಿದರು.