ಚಿತ್ರದುರ್ಗ: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಪಕ್ಷದಲ್ಲಿ ಯಾವುದೇ ಲಾಬಿ ನಡೆದಿಲ್ಲ. ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಪಕ್ಷದಲ್ಲಿ ಲಾಬಿ ನಡೆದಿಲ್ಲ: ಸಚಿವ ಕೆ.ಎಸ್. ಈಶ್ವರಪ್ಪ - ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಲ್ಲಿ ಲಾಬಿ ನಡೆಯುತ್ತಿದೆ ಎಂಬ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ತಳ್ಳಿಹಾಕಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಲಾಬಿ ನಡೆದಿಲ್ಲವೆಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಜೂನ್ 15 ರಂದು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ. ಕೇಂದ್ರದ ನಾಯಕರು ಪ್ರಮುಖ ಕಾರ್ಯಕರ್ತರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ್ದಾರೆ. ಬಿಜೆಪಿಯಲ್ಲಿ ಪ್ರಮುಖ ನಾಯಕರು ಕೂಡ ಕಾರ್ಯಕರ್ತರಾಗಿದ್ದು, ನಮಗ್ಯಾರಿಗೂ ಕೊಂಬಿಲ್ಲ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವ ನಾಯಕರ ಸೋಲು-ಗೆಲುವಿನ ಪ್ರಶ್ನೆಯಿಲ್ಲ. ಯಾವುದೇ ಟಿಕೆಟ್ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಬಿಜೆಪಿಗೆ ಬಂದವರೆಲ್ಲ ಪಕ್ಷದ ಕಾರ್ಯಕರ್ತರು. ಅವರೆಲ್ಲ ಕಾಂಗ್ರೆಸ್, ಜೆಡಿಎಸ್ ಪಕ್ಷದವರಲ್ಲ. ಮುನಿರತ್ನ, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ರೋಷನ್ ಬೇಗ್ ಅವರು ಪಕ್ಷದವರಾಗಿ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಎಂಎಲ್ಸಿ ಟಿಕೆಟ್ ಕೇಳುವ ಅರ್ಹತೆಯಿದೆ. ಜಾತಿವಾರು ಟಿಕೆಟ್ ಕೊಡುವ ಪ್ರಶ್ನೆಯಿಲ್ಲ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.