ಚಿತ್ರದುರ್ಗ: ಸರ್ಕಾರಿ ಪದವಿ ಕಾಲೇಜು ಸ್ಥಳಾಂತರ ವಿರೋಧಿಸಿ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತುರವನೂರು ಗ್ರಾಮದ ಸರ್ಕಾರಿ ಪದವಿ ಕಾಲೇಜು ಅನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೆ ಕನ್ನಡ ಪರ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ನೀಡಿವೆ.