ಚಿತ್ರದುರ್ಗ: ರಾಜಕೀಯದಲ್ಲಿ ಯಾರೂ ಶತ್ರು ಅಲ್ಲ, ಯಾರೂ ಮಿತ್ರರೂ ಅಲ್ಲ ಎಂಬಂತೆ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯರನ್ನು ಹೊರಗಿಡುವ ಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ನನ್ನ ಕ್ಷೇತ್ರ ಬಿಟ್ಟು ಕೊಡಲು ನಾನು ಸಿದ್ಧ ಎಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಬಿಜೆಪಿಗೆ ಆಹ್ವಾನಿಸಿದರು.
ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ನನ್ನ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ: ಶಾಸಕ ತಿಪ್ಪಾರೆಡ್ಡಿ - ಸಿದ್ಧರಾಮಯ್ಯ ಸ್ಪರ್ಧಿಸಲಿ ಎಂದು ಬಿಜೆಪಿಗೆ ಆಹ್ವಾನ
ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ನನ್ನ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ಆಹ್ವಾನಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಬಿಜೆಪಿಗೆ ಆಹ್ವಾನಿಸಿದರು. ಪ್ರಧಾನಿ ಮೋದಿಯವರನ್ನು ಒದ್ದು ಓಡಿಸಲು ಮುಸ್ಲಿಂ ಒಗ್ಗಟ್ಟಾಗಬೇಕೆಂಬ ಮಾಜಿ ಸ್ಪೀಕರ್ ರಮೇಶಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ತಿಪ್ಪಾರೆಡ್ಡಿ, ರಮೇಶ ಕುಮಾರ್ ಹೇಳಿಕೆ ನನಗೂ ಆಶ್ಚರ್ಯಕರವಾಗಿದೆ. ವಿಧಾನಸಭೆಯಲ್ಲಿ ಜನಪ್ರತಿನಿಧಿ, ಸಂವಿಧಾನದ ಬಗ್ಗೆ ಚೆನ್ನಾಗಿ ಮಾತನಾಡ್ತಾರೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದು ನೋಡಿದರೆ ನಡೆ, ನುಡಿ ನಡುವೆ ವ್ಯತ್ಯಾಸ ಕಾಣುತ್ತದೆ ಎಂದು ಕಿಡಿಕಾರಿದರು.
ರಮೇಶ್ ಕುಮಾರ್ ಅವರು ಮೋದಿಗೆ ಮತ ಹಾಕದೇ ಇರಬಹುದು, ದೇಶದ ಜನ ಮತ ಹಾಕಿ ಮೋದಿ ಅವರನ್ನು ಪ್ರಧಾನಿ ಮಾಡಿದ್ದಾರೆ. ಆದರೆ ಈ ನಡುವೆ ರಮೇಶ್ ಕುಮಾರ್ ಹೆಚ್ಚು ಕಮ್ಮಿ ಮಾತನಾಡುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಮನಸೋ ಇಚ್ಛೆ ಮಾತನಾಡ್ತಿದ್ದಾರೆ ಎಂದರು.