ಚಿತ್ರದುರ್ಗ : ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದೆ. ಮೋದಿ ದೇಶದ ಪ್ರಧಾನಿಯಾದ ಬಳಿಕ ಇಡೀ ವಿಶ್ವವವೇ ಭಾರತವನ್ನು ತಿರುಗಿ ನೋಡುತ್ತಿವೆ ಎಂದು ನಮೋ ಗುಣಗಾನ ಮಾಡಿದ್ದಾರೆಸಂಸದ ಎ ನಾರಾಯಣ ಸ್ವಾಮಿ.
ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೋದಿಯವರು 2ನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿದ್ದ 370 ಕಾಯ್ದೆ ರದ್ದುಗೊಳಿಸಿತು. ಅದೇ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸುವಲ್ಲಿ ಯಶಸ್ವಿಯಾಗಿದ್ದೇವೆ.