ಚಿತ್ರದುರ್ಗ :ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಪರ್ಯಾಯವಾಗಿ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಸಂಸದ ಎ.ನಾರಾಯಣಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿದರೆ, ತಕ್ಷಣವೇ ಭದ್ರಾ ಮೇಲ್ದಂಡೆ ಯೋಜನೆಯ ಇಂಜಿನಿಯರ್‌ಗಳ ಬಳಿ ಚರ್ಚೆಸಿ ಪರ್ಯಾಯವಾಗಿ ಅನುಕೂಲಕ್ಕೆ ಒತ್ತು ನೀಡುತ್ತೇವೆ. ರೈತರಿಗೆ ಪರ್ಯಾಯ ನೀರು ಒದಗಿಸುವ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಂಸದ ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ.
ಇದಕ್ಕೂ ಮೊದಲು ಈಟಿವಿ ಭಾರತ ‘ಚಿತ್ರದುರ್ಗ ಜಿಲ್ಲೆಯ ನೀರಾವರಿಗೆ ಕಂಟಕವಾಯ್ತಾ ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿ?’ಎಂಬ ಶೀರ್ಷಿಕೆಯಡಿ ಈ ಕುರಿತು ಸುದ್ದಿ ಪ್ರಕಟಿಸಿತ್ತು. ಈಟಿವಿ ಭಾರತ ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿದ ಸಂಸದರು, ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿ, ಗೂಳಿಹಟ್ಟಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ಕಾಮಗಾರಿ ನಡೆಯುವ ಸ್ಥಳಕ್ಕೆ ಖುದ್ದಾಗಿ ತೆರಳಿ ಪರಿಶೀಲಿಸುತ್ತೇವೆ ಎಂದರು.