ಚಿತ್ರದುರ್ಗ: ಮದ್ಯ ಸೇವಿಸಲು ಹಣ ಕೊಡುವುದಿಲ್ಲ ಎಂದು ನಿರಾಕರಿಸಿದ ಹಿನ್ನೆಲೆ ತೋಟದ ಮನೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಣ್ಣೆಗೆ ಹಣ ಕೊಡಲು ನಿರಾಕರಿಸಿದ ಪತ್ನಿಯ ಕೊಲೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ - ಚಿತ್ರದುರ್ಗ ಕೊಲೆ
ಕುಡಿಯಲು ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅರೆಸ್ಟ್
ಶಿವಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರ ಗ್ರಾಮದಲ್ಲಿ ಸೋಮವಾರ ಶಿವಣ್ಣ, ತನ್ನ ಪತ್ನಿ ಫಾಲಕ್ಷಾ ಅವರಿಗೆ ಹೊಡೆದು ನೇಣುಹಾಕಿ ಇದು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದನು. ಆದರೆ, ಈ ಕುರಿತು ತಳಕು ಪೊಲೀಸರು ತನಿಖೆ ನಡೆಸಿದ ವೇಳೆ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿದುಬಂದಿದೆ.
ಈ ಸಂಬಂಧ ಡಿವೈಎಸ್ಪಿ ಶ್ರೀಧರ್ ನೇತೃತ್ವದಲ್ಲಿ ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಪಿಎಸ್ಐ ತಿಮ್ಮಪ್ಪ ತಂಡ ರಚಿಸಿ ಆರೋಪಿಯನ್ನು ಪತ್ತೆಹಚ್ಚಿದ್ದು, ಶಿವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated : Nov 4, 2021, 9:32 AM IST