ಚಿತ್ರದುರ್ಗ : ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹರವಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹರವಿಗೊಂಡನಹಳ್ಳಿ ಗ್ರಾಮದ ಚಂದ್ರಣ್ಣ (55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಚಂದ್ರಣ್ಣ, ರಮೇಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕಟ್ಟಿಗೆ ಇದ್ದಿಲು ತಯಾರಿಸುವ ಕೆಲಸ ಮಾಡುತ್ತಿದ್ದ. ರಾತ್ರಿ ಜಮೀನಿನಲ್ಲಿ ಇದ್ದಿಲು ತಯಾರಿಸಿ ಅಲ್ಲೇ ಕಾವಲು ಕಾಯುತ್ತ ಮಲಗಿದ್ದಾನೆ. ಈ ವೇಳೆ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಕೇಸು ದಾಖಲಿಸಿಕೊಂಡಿರುವ ಪರಶುರಾಮಪುರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗೆ ಶೋಧಕಾರ್ಯ ನಡೆಯುತ್ತಿದೆ.