ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಇಂದು ಆದೇಶಿಸಿದೆ. ನಿನ್ನೆ (ಭಾನುವಾರ) ಶ್ರೀಗಳ ಕಸ್ಟಡಿ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‍ಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು.
ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ - ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ
ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮುರುಘಾ ಮಠದ ಪೀಠಾಧಿಪತಿಯನ್ನು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Muruga Mutt Shivamurthy Swamiji Sent to Judicial Custody Until Sept 14
ವಿಚಾರಣೆ ನಡೆಸಿದ ನ್ಯಾಯಾಲಯವು ಸೆಪ್ಟೆಂಬರ್ 14ರ ವರೆಗೆ ಅಂದ್ರೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಭಾನುವಾರ ಮುರುಘಾ ಶರಣರನ್ನು ಮಠಕ್ಕೆ ಕರೆತಂದು ಸ್ಥಳ ಮಹಜರು ನಡೆಸಲಾಗಿತ್ತು. ಬಿಗಿ ಭದ್ರತೆಯಲ್ಲಿ ಮಧ್ಯಾಹ್ನ ಮಠಕ್ಕೆ ಕರೆತಂದ ಪೊಲೀಸರು, ಸ್ಥಳ ಮಹಜರು ನಡೆಸಿದ್ದರು.
ಇದನ್ನೂ ಓದಿ:ಗುರು ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ಆತ್ಮಹತ್ಯೆ