ಚಿತ್ರದುರ್ಗ:ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಸೆ. 27ರವರೆಗೆ ವಿಸ್ತರಿಸಿದೆ. ಸ್ವಾಮೀಜಿಯ ನ್ಯಾಯಾಂಗ ಬಂಧನ ಬುಧವಾರ ಅಂತ್ಯಗೊಳ್ಳಲಿರುವ ಹಿನ್ನೆಲೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಇಂದು ಹಾಜರು ಪಡಿಸಲಾಗಿತ್ತು.
ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ಪ್ರಕರಣದ ವಿಚಾರಣೆ ನಡೆಸಿ, ಮತ್ತೆ 14 ದಿನಕ್ಕೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಮಾಡಿದ್ದಾರೆ. ಸೆಪ್ಟೆಂಬರ್ 1 ರ ರಾತ್ರಿ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಸೆ. 2 ರಂದು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಯಿತು. ನಂತರ ಅದೇ ನ್ಯಾಯಾಲಯದಿಂದ ಸೆ. 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರನ್ನು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.