ಕರ್ನಾಟಕ

karnataka

ETV Bharat / state

ವೈದ್ಯಕೀಯ ಕಾರಣ ನೀಡಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಮುರುಘಾ ಶ್ರೀಗಳು - ಸೆ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ

ವೈದ್ಯಕೀಯ ಕಾರಣ ನೀಡಿ ಜಾಮೀನು ಕೋರಿ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

Murugha Sharanaru has moved to court seeking bail
Murugha Sharanaru has moved to court seeking bail

By

Published : Sep 3, 2022, 2:36 PM IST

ಚಿತ್ರದುರ್ಗ:ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಶ್ರೀಗಳ ಪರ ವಕೀಲ ಉಮೇಶ್ ಎಂಬುವವರು ಸಿಆರ್​ಪಿಸಿ 439ರಡಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ವಿಚಾರಣೆ ನಡೆಯಲಿದೆ.

ವೈದ್ಯಕೀಯ ವರದಿ ಆಧಾರದಲ್ಲಿ ಶ್ರೀಗಳು ಚಿತ್ರದುರ್ಗದ ಸೆಷನ್ಸ್ ಕೋರ್ಟ್​ನಲ್ಲಿ​ ಜಾಮೀನಿಗಾಗಿ ಮನವಿ ಮಾಡಿದ್ದು, ನ್ಯಾಯಾಲಯ ಇಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ನಿನ್ನೆ ನಡೆದ ನಾಟಕೀಯ ಬೆಳವಣಿಗೆಯ ಬಳಿಕ ಸೆ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಈ ನಡುವೆ ಮುರುಘಾಶ್ರೀ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದು, ಇಂದು ಆದೇಶ ನೀಡಲಿದೆ ಅನ್ನೋದನ್ನು ಕಾದುನೋಡಬೇಕು.

ಇದನ್ನೂ ಓದಿ:ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ.. ವಿಡಿಯೋ ವೈರಲ್​

ABOUT THE AUTHOR

...view details