ಚಿತ್ರದುರ್ಗ:ದೇಶಕ್ಕೆ ಸಂವಿಧಾನ ಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಅದು ಮೇಲ್ನೋಟಕ್ಕೆ ಕಾಣಿಸುತ್ತದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದಷ್ಟು ಅವಮಾನ ಬೇರೆ ಯಾವ ಪಕ್ಷವೂ ಮಾಡಿಲ್ಲ. ಅಷ್ಟೇ ಯಾಕೆ ಅಂಬೇಡ್ಕರ್ ಸಮಾಧಿಗೆ ಜಾಗ ಕೊಡದ ಕಾಂಗ್ರೆಸ್ ಸರ್ಕಾರ, ದಲಿತರ ಬಗ್ಗೆ ಮಾತಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.
ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಘಟಕ ಉದ್ಘಾಟಿಸಿ ಮಾತಾಡಿದ ಅವರು, ಬಿಜೆಪಿಗೆ ತಾಕತ್ ಇದ್ದರೆ, ದಲಿತ ಸಿಎಂ ಘೋಷಣೆ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದ್ರೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪರಮೇಶ್ವರ್ಗೆ ಯಾವ ಸ್ಥಾನಮಾನ ನೀಡಿದ್ದರು. ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಪರಮೇಶ್ವರ್ ಡಿಸಿಎಂ ಆಗಿದ್ದು. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಯಾರು ಅಡ್ಡಿ ಬರಬಾರದು ಎಂಬ ಉದ್ದೇಶದಿಂದಲೇ ಹಿರಿಯ ಧುರೀಣ ಮಲ್ಲಿಕಾರ್ಜುನ ಖರ್ಗೆಯನ್ನ ಸೋಲಿಸಿದ್ರು.
ಪರಮೇಶ್ವರ್, ಬಿ.ಎನ್.ಚಂದ್ರಪ್ಪ ಸೇರಿದಂತೆ ದಲಿತ ರಾಜಕಾರಣಿಗಳು ಚುನಾವಣೆಯಲ್ಲಿ ಸೋಲಲು ಸಿದ್ದರಾಮಯ್ಯ ಕಾರಣ. ಅಂತಹ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತಾಡ್ತಿರೋದು ಹಾಸ್ಯಾಸ್ಪದವಾಗಿದೆ ಎಂದರು.