ಚಿತ್ರದುರ್ಗ :ಚಳ್ಳಕೆರೆ ನಗರಸಭೆಗೆ 2017-18 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆಗೆ ರಾಷ್ಟ್ರೀಯ ಪ್ರಶಸ್ತಿ ದೊರತಿದೆ. ಚಳ್ಳಕೆರೆ ಪಟ್ಟಣ ಪಂಕಜಮ್ಮ ಎಂಬುವರು ಪ್ರಧಾನಮಂತ್ರಿ ಆವಾಸ್ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣ ಮಾಡಿಕೊಂಡಿದ್ದರು. ಈ ಮನೆ ಅತ್ಯುತ್ತಮ ಮನೆ ನಿರ್ಮಾಣ ಎಂದು ಇಂದು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಇನ್ನು, ಫಲಾನುಭವಿ ಪಂಕಜಮ್ಮ ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ಮೂಲಕವಾಗಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಚಳ್ಳಕೆರೆ ನಗರಸಭೆ ಅಧಿಕಾರಿಗಳು ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ.