ಚಿತ್ರದುರ್ಗ:ಕೊರೊನಾ ವೈರಸ್ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರನ್ನು ಆತಂಕಕ್ಕೆ ದೂಡಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿಂದು 6 ಜನರಿಗೆ ಅಂಟಿದ ಕೊರೊನಾ - chitradurga news
ಜಿಲ್ಲೆಯಲ್ಲಿ ಆರು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕು
ಜಿಲ್ಲೆಯಲ್ಲಿ ಇಂದು ಆರು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ, ಮೊಳಕಾಲ್ಮೂರಿನಲ್ಲಿ ತಲಾ ಒಬ್ಬರು, ಚಳ್ಳಕೆರೆಯ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಚಿತ್ರದುರ್ಗದ 50 ವರ್ಷದ ಮಹಿಳೆ, ಮೊಳಕಾಲ್ಮೂರಿನ 27 ವರ್ಷದ ಯುವಕ, ಚಳ್ಳಕೆರೆಯಲ್ಲಿ 63 ವರ್ಷದ ವೃದ್ಧ, 52 ವರ್ಷದ ಮಹಿಳೆ, 65 ವರ್ಷದ ವೃದ್ಧ, 42 ವರ್ಷದ ವ್ಯಕ್ತಿಗೆ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ಶತಕದ ಸಮೀಪವಿದೆ.